ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಹಾಮಾರಿ ಕೊರೊನಾ ಸೋಂಕು ರಾಜ್ಯದಲ್ಲಿ ಅಟ್ಟಹಾಸಗೈಯ್ಯುತ್ತಿದ್ದು, ಇಂದು 271 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6516ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದೇ ದಿನ ಕೊರೊನಾ ಸೋಂಕಿಗೆ 7 ಜನರು ಸಾವನ್ನಪ್ಪಿದ್ದಾರೆ.ಬೆಂಗಳೂರಿನಲ್ಲಿ ನಾಲ್ವರು ಹಾಗೂ ಕಲಬುರಗಿಯಲ್ಲಿ ಇಬ್ಬರು ಮತ್ತು ಹಾಸನದಲ್ಲಿ ಓರ್ವ ಬಲಿಯಾಗಿದ್ದಾರೆ. ಇಂದು ಹೊಸದಾಗಿ 271 ಜನರಲ್ಲಿ ಸೋಂಕು ದೃಢಪಟ್ಟಿದೆ.
ಬಳ್ಳಾರಿ 97, ಬೆಂಗಳೂರು ನಗರ 36, ಉದುಪಿ 22, ಧಾರವಾಡ 12, ಕಲಬುರಗಿ 20, ದಕ್ಷಿಣ ಕನ್ನಡ 17, ಬೀದರ್ 10, ಹಾಸನ 9, ಮೈಸೂರು 9 ಶಿವಮೊಗ್ಗ 6, ಚಿತ್ರದುರ್ಗ 3, ರಾಮನಗರ 3, ವಿಜಯಪುರ, ಕೋಲಾರ ತಲಾ 1 ಕೇಸ್ ಪತ್ತೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ