ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿದ್ದು, ಎರಡನೇ ಅಲೆ ಭೀತಿ ಆರಂಭವಾಗಿದೆ. ಸೋಂಕು ನಿಯಂತ್ರಣಕ್ಕೆ ಸರ್ಕಾರದಿಂದ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದೆ. ಹೀಗಾಗಿ ಜನರು ಮುಂಜಾಗೃತಾ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳಬೇಕಿರುವ ಅಗತ್ಯವಿದೆ. ಲಾಕ್ ಡೌನ್, ಸೆಮಿ ಲಾಕ್ ಡೌನ್ ಬಗ್ಗೆ ಸರ್ಕಾರ ಯಾವುದೇ ರೀತಿಯ ಚಿಂತನೆ ಮಾಡಿಲ್ಲ. ಈ ಬಗ್ಗೆ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಜನರು ಊಹಾಪೂಹಗಳಿಗೆ ಕಿವಿಗೊಡುವ ಅಗತ್ಯವಿಲ್ಲ. ಆದರೆ ಜನರೇ ಕೊರೊನಾ ಬಗ್ಗೆ ಎಚ್ಚೆತ್ತುಕೊಂಡು ನಿಯಮಗಳನ್ನು ಪಾಲಿಸಬೇಕು ಎಂದರು.
ಮತ್ತೆ ಲಾಕ್ ಡೌನ್ ಜಾರಿಯಿಂದ ಎಲ್ಲಾ ಕ್ಷೇತ್ರಗಳು ಸಂಕಷ್ಟ ಸಿಲುಕಲಿದೆ. ಲಾಕ್ ಡೌನ್ ಬಗ್ಗೆ ಸರ್ಕಾರ ಚಿಂತನೆ ನಡೆಸಿಲ್ಲ. ಆದರೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಯಾವ ರೀತಿ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬಹುದು ಎಂಬುದನ್ನು ನಿರ್ಧರಿಸಲಾಗುತ್ತದೆ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ