Latest

ಕೊರೊನಾ ಮಹಾಮಾರಿಗೆ ಒಂದೇ ಕುಟುಂಬದ ಮೂವರು ಬಲಿ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೇ ಕುಟುಂಬದ ಮೂವರು 10 ದಿನದ ಅಂತರದಲ್ಲಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರಾ? ಇಂಥದ್ದೊಂದು ಅನುಮಾನ ಮೂಡುತ್ತಿದೆ. ಘಟನೆಯಿಂದಾಗಿ ಇಡೀ ಕುಟುಂಬಕ್ಕೆ ದಿಕ್ಕೇ ತೋಚದಂತಾಗಿದೆ.

ಬೆಂಗಳೂರಿನ ಕೆ ಆರ್ ಪುರಂ ನ ನಿವಾಸಿ ಪತ್ನಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಿದ್ದರು. ಈ ವೇಳೆ ಪತ್ನಿಗೆ ಕೊರೊನಾ ವೈರಸ್ ಇರುವುದು ದೃಢಪಟ್ಟಿದೆ. ಪತ್ನಿಯನ್ನು ಚಿಕಿತ್ಸೆಗೆ ದಾಖಲಿಸಿ ಕಾರಲ್ಲಿ ಬಂದು ಕುಳಿತಿದ್ದ ಪತಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಬಂದ ಹಿರಿಯ ಮಗ ದು:ಖತಪ್ತನಾಗಿದ್ದಾನೆ. ತಂದೆಯ ಅಂತ್ಯಕ್ರಿಯೆಯನ್ನು ನೆರವೇರಿಸಿ ಮನೆಗೆ ಬಂದಿದ್ದಾನೆ. ಇದೇ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಾಯಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಸುದ್ದಿ ತಿಳಿದಿದೆ. ಅಂತ್ಯಕ್ರಿಯೆ ನಡೆಸಲು ಮೃತದೇಹವನ್ನು ನೀಡುವಂತೆ ಕೇಳಿದರೂ ಆಸ್ಪತ್ರೆ ಸಿಬ್ಬಂದಿ ಕುಟುಂಬಕ್ಕೆ ಮೃತ ದೇಹ ಹಸ್ತಾಂತರ ಮಾಡಲು ಒಪ್ಪಿಲ್ಲ.

ಘಟನೆಗಳಿಂದ ಬೇಸತ್ತ ಹಿರಿಯ ಮಗನಿಗೆ ಇದೀಗ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಇದೀಗ ಮಗನಿಗೂ ಕೊವಿಡ್ ಟೆಸ್ಟ್ ಮಾಡಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ. 10 ದಿನದ ಅಂತರದಲ್ಲಿ ತಂದೆ-ತಾಯಿ-ಮಗ ಮೂವರೂ ಸಾವನ್ನಪ್ಪಿರುವುದು ಕುಟುಂಬಕ್ಕೆ ಆಘಾತವನ್ನುಂಟುಮಾಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button