ಪ್ರಗತಿವಾಹಿನಿ ಸುದಿ; ಬೆಂಗಳೂರು: ದೇಶಾದ್ಯಂತ ಹೆಚ್ಚುತ್ತಿರುವ ಕೊರೊನಾ ನಿಯಂತ್ರಣಕ್ಕೆ ವಿಮಾನಯಾನ ಸಚಿವಾಲಯ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ನಾಳೆಯಿಂದ ದೇಸಿಯ ವಿಮಾನ ಹಾರಾಟ ಕೂಡ ಸ್ಥಗಿತಗೊಳ್ಳಲಿವೆ.
ನಾಳೆ ಮಧ್ಯರಾತ್ರಿಯಿಂದ ಎಲ್ಲ ದೇಸಿಯ ವಿಮಾನಯಾನ ಸೇವೆಯನ್ನು ರದ್ದುಗೊಳಿಸಲಾಗಿದೆ. ವಿಶ್ವಾದ್ಯಂತ ಕೊರೊನಾ ಸೋಂಕು ವ್ಯಾಪಿಸುತ್ತಿರುವ ಹಿನ್ನಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮಾ.31ರವರೆಗೆ ಈಗಾಗಲೇ ಅಂತಾರಾಷ್ಟ್ರೀಯ ವಿಮಾನಗಳು ಭಾರತ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದರ ಬೆನ್ನಲ್ಲೇ ನಾಳೆಯಿಂದ ಡೊಮೆಸ್ಟಿಕ್ ವಿಮಾನಯಾನ ಸೇವೆಯನ್ನು ರದ್ದು ಮಾಡಲಾಗಿದೆ.
ಈಗಾಗಲೇ ಕೊರೋನಾ ವೈರಸ್ಗೆ ದೇಶದಲ್ಲಿ 9 ಮಂದಿ ಬಲಿಯಾಗಿದ್ದು, 415ಕ್ಕೂ ಹೆಚ್ಚು ಮಂದಿ ಸೋಂಕು ಪೀಡಿತರಾಗಿದ್ದಾರೆ. ಆರೋಗ್ಯ ಇಲಾಖೆ ಇತ್ತೀಚಿನ ಮಾಹಿತಿ ಪ್ರಕಾರ ಇಂದು ಒಂದೇ ದಿನ ಕರ್ನಾಟಕದಲ್ಲಿ 7 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ