ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಾಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂದು ಒಂದೇ ದಿನದಲ್ಲಿ 34 ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 635 ಕ್ಕೆ ಏರಿಕೆಯಾಗಿದೆ.
ಆರೋಗ್ಯ ಇಲಾಖೆ ನೀಡಿದ ಮಾಹಿತಿ ಪ್ರಕಾರ ದಾವಣಗೆರೆ ಜಿಲ್ಲೆಯೊಂದರಲ್ಲೇ ಬರೋಬ್ಬರಿ 21 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಕಲಬುರಗಿಯಲ್ಲಿ 6, ಬೆಂಗಳೂರು 4, ಬಾಗಲಕೋಟೆ 4 ಪ್ರಕರಣಗಳು ಪತ್ತೆಯಾಗಿವೆ.
ದಾವಣಗೆರೆಯಲ್ಲಿ ಜಿಲ್ಲಾಡಳಿತ ಕಳುಹಿಸಿದ 94 ಸ್ಯಾಂಪಲ್ ಗಳ ಪೈಕಿ 21 ಮಂದಿಗೆ ಸೋಂಕು ತಗುಲರೋದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಓರ್ವ ಸೋಂಕಿತನಿಂದ 21 ಮಂದಿಗೆ ಸೋಂಕು ಹರಡಿದೆ ಎಂದು ತಿಳಿದುಬಂದಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ಒಟ್ಟಾರೆ ನಾಳೆಯಿಂದ ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆಯಾಗುತ್ತಿದ್ದು, ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ