Latest

ರಾಜ್ಯದಲ್ಲಿ 3,693 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಶರವೇಗದಲ್ಲಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 3,693 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 55,115ಕ್ಕೆ ಏರಿಕೆಯಾಗಿದೆ.

ಈ ಕುರಿತು ವೈದ್ಯಕೀಯ ಶಿಕ್ಷಣ ಸಚಿವ ಕೆ ಸುಧಾಕರ್ ಮಾಹಿತಿ ನೀಡಿದ್ದು, ರಾಜಧಾನಿ ಬೆಂಗಳೂರಿನಲ್ಲಿಯೇ ಇಂದು 2208 ಜನರಿಗೆ ಸೋಂಕು ಇರುವುದು ಪತ್ತೆಯಾಗಿದೆ. ಇಂದು ಬೆಂಗಳೂರಿನಲ್ಲಿ 75 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ ಎಂದರು.

Home add -Advt

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೊರೊನಾಗೆ 115 ಜನ ಸಾವನ್ನಪ್ಪಿದ್ದಾರೆ. ಈ ಮೂಲಕ ಸೋಂಕಿಗೆ ಬಲಿಯಾದವರ ಸಂಖ್ಯೆ 1147ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.

ಬೆಳಗಾವಿಯಲ್ಲಿ ಇಂದು 95 ಜನರಿಗೆ ಸೋಂಕು, 4 ಜನರ ಸಾವು

Related Articles

Back to top button