Latest

ಕೊಂಚ ಸುಧಾರಣೆ ಕಂಡ ಕೊರೊನಾ ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಇದೇ ಮೊದಲ ಬಾರಿಗೆ ದಿನವೊಂದರಲ್ಲಿ ಕೊರೊನಾ ಸೋಂಕು ಹರಡುವಿಕೆಯಲ್ಲಿ ತುಸು ಸುಧಾರಣೆ ಕಂಡುಬಂದಿದೆ. ಕಳೆದ 24 ಗಂಟೆಯಲ್ಲಿ 37,148 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು ದೇಶದ ಕೊರೊನಾ ಪೀಡಿತರ ಸಂಖ್ಯೆ 11,55,578ಕ್ಕೆ ಏರಿಕೆಯಾಗಿದೆ.

ಜುಲೈ 18ರಂದು 38 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡು ಬಂದಿದ್ದರೆ ಜುಲೈ 19ರಂದು 40 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು. ಇದೀಗ 37,148 ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಮುಖವಾದಂತಿದೆ.

Home add -Advt

ಸೋಮವಾರ 587 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 28,084‌ಕ್ಕೆ ಏರಿಕೆಯಾಗಿದೆ. ಈವರೆಗೆ ಕೊರೊನಾದಿಂದ ಗುಣ ಆದವರು 7,24,578. ದೇಶದಲ್ಲಿ ಇನ್ನೂ 4,02,529 ಜನರಲ್ಲಿ ಕೊರೊನಾ ಸಕ್ರಿಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಬಿಡುಗಡೆ ಮಾಡಿದೆ.

Related Articles

Back to top button