Latest

24 ಗಂಟೆಯಲ್ಲಿ 39 ಸಾವಿರ ಜನರಿಗೆ ಕೊರೊನಾ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಹೆಚ್ಚುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 38,902 ಪ್ರಕರಣಗಳು ಪತ್ತೆಯಾಗಿದ್ದು ದೇಶದ ಕೊರೋನಾ ಪೀಡಿತರ ಸಂಖ್ಯೆ 10,77,618ಕ್ಕೆ ಏರಿಕೆಯಾಗಿದೆ.

ಶನಿವಾರ 543 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 26 ಸಾವಿರದ ಗಡಿ‌ ದಾಟಿದ್ದು 26,816ಕ್ಕೆ ಏರಿಕೆಯಾಗಿದೆ.

Home add -Advt

ಈವರೆಗೆ ಕೊರೊನಾದಿಂದ ಗುಣ ಆದವರು 6,77,423 ಜನ ಮಾತ್ರ. ದೇಶದಲ್ಲಿ ಇನ್ನೂ 3,73,379 ಜನರಲ್ಲಿ ಕೊರೋನಾ ಸಕ್ರೀಯವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಬಿಡುಗಡೆ ಮಾಡಿದೆ.

ಜುಲೈ 17ರಂದು ಕೂಡ 34 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದವು. ನಿನ್ನೆ ಮತ್ತು ಇಂದು 38 ಸಾವಿರ ದಾಟಿದೆ.

Related Articles

Back to top button