ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 45,720 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 12.38 ಲಕ್ಷ ದಾಟಿದೆ.
ಒಂದೇ ದಿನದಲ್ಲಿ 1,129 ಮಂದಿ ಕೊರೊನಾಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 29,861ಕ್ಕೇರಿದೆ. ಚೇತರಿಸಿಕೊಂಡವರ ಸಂಖ್ಯೆ 7,82,606 ಲಕ್ಷ ಜನ ಮಾತ್ರ. ದೇಶದಲ್ಲಿ ಇದುವರೆಗೂ 12,38,635 ಮಂದಿ ಸೋಂಕಿಗೆ ತುತ್ತಾಗಿದ್ದಾರೆ. 4,26,167 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ನಡುವೆ ಕೊರೊನಾ ಲಸಿಕೆ ಲಭ್ಯತೆಗೆ ಸಂಶೋಧನೆಗಳು ಮುಂದುವರೆಯುತ್ತಿವೆ ಆದರೆ ಯಾರೂ ಲಸಿಕೆಗಾಗಿ ಕಾಯುತ್ತಾ ಕೂರಬೇಡಿ. ಈಗ ಲಭ್ಯ ಇರುವ ಔಷಧಗಳ ಮೂಲಕವೇ ಸೋಂಕಿತರ ಚಿಕಿತ್ಸೆಗೆ ಮುಂದಾಗಿ ಸಾವು ತಪ್ಪಿಸಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಕರೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ