ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಎರಡು ದಿನಗಳಿಂದ ಕೊರೋನಾ ಸೋಂಕು ಹೆಚ್ಚುತ್ತಿದ್ದು, ಒಂದೇ ದಿನ ಸುಮಾರು 4,898 ಹೊಸ ಕೊರೊನಾ ಪ್ರಕರಣಗಳು ಕಂಡುಬಂದಿವೆ. ಈ ನಡುವೆ ಇಂದಿನಿಂದ ಮೂರನೇ ಹಂತದ ಲಾಕ್‌ಡೌನ್ ಆರಂಭವಾಗಿದ್ದು ಕೇಂದ್ರ ಸರ್ಕಾರ ಹಲವಾರು ನಿರ್ಬಂಧಗಳನ್ನು ಸಡಿಲಗೊಳಿಸಿದೆ.
ಕೊರೋನಾ ದಿಂದಾಗಿ ಕಳೆದ 24 ಗಂಟೆಯಲ್ಲಿ 83 ರೋಗಿಗಳು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 1,306 ಕ್ಕೆ ಏರಿದೆ. ದೇಶದಲ್ಲಿ ಪ್ರಸ್ತುತ 28,070 ಸಕ್ರಿಯ ಕೋವಿಡ್ -19 ರೋಗಿಗಳಿದ್ದಾರೆ. 10,886 ರೋಗಿಗಳು ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ ಎಂದು ಕೇಂದ್ರ ಸಚಿವಾಲಯ ತಿಳಿಸಿದೆ. ಒಟ್ಟು ಸಂಖ್ಯೆ ಸೋಂಕಿತರ ಸಂಖ್ಯೆ 40,000 ಗಡಿ ದಾಟಿದೆ.
ಇಂದಿನಿಂದ ಮೇ 17ರವರೆಗೆ ಮೂರನೇ ಹಂತದ ಲಾಕ್‌ಡೌನ್ ಮುಂದುವರೆಯಲಿದೆ. ಕೆಲ ರಾಜ್ಯಗಳಲ್ಲಿ ಆರೆಂಜ್ ಹಾಗೂ ಗ್ರೀನ್ ಝೋನ್ ಗಳಲ್ಲಿ ಕೆಲಸಡಿಲಿಕೆಗಳನ್ನು ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ