ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಸ್ಫೋಟಗೊಂಡಿದ್ದು, ಕಳೆದ 24 ಗಂಟೆಗಳಲ್ಲಿ ದಾಖಲೆಯ 49,931 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಭಾರತದಲ್ಲಿ ಸೋಂಕಿತರ ಸಂಖ್ಯೆ 14,35,453ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಒಂದೇ ದಿನ 708 ಮಂದಿ ಮಹಾಮಾರಿ ವೈರಸ್ ಗೆ ಬಲಿಯಾಗಿದ್ದು, ಮೃತರ ಸಂಖ್ಯೆ 32,771ಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.
ಇನ್ನು 14,35,453 ಮಂದಿ ಸೋಂಕಿತರ ಪೈಕಿ 9,17,568 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ದೇಶದಲ್ಲಿ ಇನ್ನೂ 4,85,114 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ.
ದೇಶದಲ್ಲಿ ಮಹಾರಾಷ್ಟ್ರ ಅತಿ ಹೆಚ್ಚು ಕೊರೊನಾ ಸೋಂಕಿತರಿರುವ ರಾಜ್ಯವಾಗಿದ್ದು, ಇಲ್ಲಿ 3,75,799 ಸೋಂಕಿತರಿದ್ದು, 13,656 ಜನರು ಸೋಂಕಿಗೆ ಬಲಿಯಾಗಿದ್ದಾರೆ. ತಮಿಳುನಾಡು 2,13,723 ಸೋಂಕಿತರೊಂದಿಗೆ ಎರಡನೇ ಸ್ಥಾನದಲ್ಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ