Latest

ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಅಗ್ನಿ ಅವಘಡ ಸಂಭವಿಸಿದ್ದು, ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಬೆಂಗಳೂರಿನ ಅತ್ತಿಬೆಲೆಯಲ್ಲಿ ಕೆಮಿಕಲ್ ಫ್ಯಾಕ್ಟರಿಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

Home add -Advt

ಬಾಯ್ಲರ್ ಸ್ಫೋಟದ ಪರಿಣಾಮ ಕೆಮಿಕಲ್ ಘಾಟು ಸುತ್ತಮುತ್ತಲ ಪ್ರದೇಶದಲ್ಲಿ ಆವರಿಸಿದ್ದು, ಜನರು ಮನೆಯಿಂದ ಹೊರಬರಲು ಭಯಪಡುತ್ತಿದ್ದಾರೆ. ಫ್ಯಾಕ್ಟರಿಯಲ್ಲಿ ದಟ್ಟ ಹೊಗೆ ಆವರಿಸಿದ್ದು ಅಗ್ನಿಶಾಮ ಸಿಬ್ಬಂದಿಗಳಿಗೆ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ.

ಎರಡು ದಿನಗಳ ಹಿಂದಷ್ಟೇ ಬೆಂಗಳೂರಿನ ಅಪಾರ್ಟ್ ಮೆಂಟ್ ಒಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸಜೀವದಹನಗೊಂಡ ಘಟನೆ ಮಾಸುವ ಮುನ್ನವೇ ನಿನ್ನೆ ನ್ಯೂ ತರಗುಪೇಟೆಯ ಗೋದಾಮಿನಲ್ಲಿ ಭಯಂಕರ ಸ್ಫೋಟ ಸಂಭವಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ ಸಂಭವಿಸಿದ್ದು, ಸಾಲು ಸಾಲು ಅಗ್ನಿ ದುರಂತಗಳು ಬೆಂಗಳೂರಿಗರನ್ನೇ ಆತಂಕಕ್ಕೀಡುಮಾಡಿದೆ.

ಕೋರ್ಟ್ ಆವರಣದಲ್ಲಿ ಗ್ಯಾಂಗ್ ವಾರ್; ನಾಲ್ವರು ಸಾವು

Related Articles

Back to top button