Latest

ಕಳೆದ 24 ಗಂಟೆಯಲ್ಲಿ 62 ಸಾವಿರಕ್ಕೂ ಹೆಚ್ಚು ಸೋಂಕಿತರು ಗುಣಮುಖ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, 70,78,123 ಸೋಂಕಿತರು ಕೊವಿಡ್ ನಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 62,077 ಸೋಂಕಿತರು ಡಿಸ್ಚಾರ್ಜ್ ಆಗಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 50,129 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 78,64,811ಕ್ಕೆ ಏರಿಕೆಯಾಗಿದೆ.

Home add -Advt

24 ಗಂಟೆಯಲ್ಲಿ 578 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,18,534ಕ್ಕೆ ಏರಿಕೆಯಾಗಿದೆ.

ನಿನ್ನೆಯೊಂದೇ ದಿನ 11,40,905 ಕೊವಿಡ್ ಸ್ಯಾಂಫಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈವರೆಗೆ 10,25,23,469 ಜನರನ್ನು ಕೊವಿಡ್ ಟೆಸ್ಟ್ ಗೆ ಒಳಪಡಿಸಲಾಗಿದೆ.

Related Articles

Back to top button