ಪ್ರಗತಿವಾಹಿನಿ ಸುದ್ದಿ; ಮಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಒಂದೇ ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢ ಪಟ್ಟಿದೆ.
ಮಂಗಳೂರಿನ ಬಳ್ಳಾಲ್ ಭಾಗ್ ಬಳಿಯ ಶ್ರೀದೇವಿ ನರ್ಸಿಂಗ್ ಕಾಲೇಜಿನ 51 ವಿದ್ಯಾರ್ಥಿಗಳಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದು, ಕಾಲೇಜು ಹಾಗೂ ಹಾಸ್ಟೆಲ್ ಗಳನ್ನು ಕಂಟೈನ್ ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.
ಕರಾವಳಿಯಲ್ಲಿ ಕೊರೊನಾ ಅಟ್ಟಹಾಸ ಆರಂಭವಾಗಿದ್ದು, ಈಗಾಗಲೇ ಯೆನೆಪೋಯ ವಿವಿಯ 9 ಶಿಕ್ಷಣ ಸಂಸ್ಥೆಗಳಿಗೆ ಬೀಗ ಹಾಕಲಾಗಿದೆ. ಶಾಲಾ-ಕಾಲೇಜುಗಳ ಆರಂಭವಾದ ಬೆನ್ನಲ್ಲೇ ಕೊರೊನಾ ಸೋಂಕು ಹರಡುತ್ತಿದೆ ಎಂದು ಹೇಳಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ