ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದ 52,123 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಳ್ಳುವ ಮೂಲಕ ಈ ವರೆಗಿನ ತನ್ನ ದಾಖಲೆಯನ್ನೇ ಮುರಿದಿದೆ.
ಇದೇ ಮೊದಲು ಬಾರಿಗೆ ಒಂದೇ ದಿನಕ್ಕೆ ಐವತ್ತು ಸಾವಿರ ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, ನಿನ್ನೆ 775 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 15,83,792ಕ್ಕೆ ಏರಿಕೆಯಾಗಿದ್ದು, ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 34,968ಕ್ಕೆ ಏರಿದೆ. ಸದ್ಯ 5,28,242 ಮಂದಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಕೊರೊನಾದಿಂದ ಚೇತರಿಸಿಕೊಂಡವರ ಸಂಖ್ಯೆ 10,20,582ಕ್ಕೆ ಏರಿದ್ದು, 64-65% ಮಂದಿ ಕೊರೊನಾದಿಂದ ಗುಣಮುಖವಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದೆ. ಒಂದೇ ದಿನ 4,46,642 ಮಂದಿಗೆ ಕೊರೊನಾ ಟೆಸ್ಟ್ ಮಾಡಿದ್ದು, ಈವರೆಗೂ ದೇಶದಲ್ಲಿ 1,81,90,382 ಪರೀಕ್ಷೆಗಳನ್ನು ನಡೆಸಿದೆ ಎಂದು ಐಸಿಎಂಆರ್ ಹೇಳಿಕೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ