Latest

52,972 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 52,972 ಜನರಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 18,03,696ಕ್ಕೆ ಏರಿಕೆಯಾಗಿದೆ.

ಒಂದೇ ದಿನ 771 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ದೇಶದಲ್ಲಿ 5,79,357 ಸಕ್ರಿಯ ಪ್ರಕರಣಗಳಿದ್ದು, 1,186,203 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇದೂವರೆಗೂ 38,135 ಮಂದಿ ಹೆಮ್ಮಾರಿ ಕೊರೊನಾ ವೈರಸ್‍ಗೆ ಬಲಿಯಾಗಿದ್ದಾರೆ.

ಮಹಾರಾಷ್ಟ್ರ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಅತೀ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಜೊತೆಗೆ ಅಸ್ಸಾಂ ಮತ್ತು ಕರ್ನಾಟಕ ರಾಜ್ಯದಲ್ಲಿಯೂ ಸೋಂಕು ವೇಗವಾಗಿ ಹರಡುತ್ತಿದೆ. ಭಾರತದಲ್ಲಿ ಚೇತರಿಕೆ ಪ್ರಮಾಣ ಹೆಚ್ಚಾಗುತ್ತಿದ್ದು, ಶೇ.65.8 ರಷ್ಟು ಮಂದಿ ಗುಣಮುಖರಾಗುತ್ತಿದ್ದಾರೆ.

 

Home add -Advt

Related Articles

Back to top button