Latest

ಕೊವಿಡ್ ನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಳ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 61,775 ಜನರು ಕೊವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಕಳೆದ 24ಗಂಟೆಯಲ್ಲಿ ದೇಶದಲ್ಲಿ 54,044 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 76,51,108ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 717 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,15,914ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 7,40,090 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 67,95,103 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Home add -Advt

Related Articles

Back to top button