Latest
ಒಂದೇ ದಿನದಲ್ಲಿ 56,282 ಜನರಲ್ಲಿ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಒಂದೆಡೆ ಮಳೆಯ ಅಬ್ಬರ ಹೆಚ್ಚುತ್ತಿದ್ದರೆ ಇನ್ನೊಂದೆಡೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 56,282 ಮಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 19,64,537ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ 904 ಜನರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದ.
ದೇಶದಲ್ಲಿ 19,64,537 ಸೋಂಕಿತರ ಪೈಕಿ 5,95,501 ಪ್ರಕರಣಗಳು ಸಕ್ರಿಯವಾಗಿದ್ದು, 13,28,337 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇದೂವರೆಗೂ 40,699 ಮಂದಿ ಹೆಮ್ಮಾರಿ ಕೊರೊನಾ ವೈರಸ್‍ಗೆ ಬಲಿಯಾಗಿದ್ದಾರೆ. ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.67ರಷ್ಟಿದೆ.
ರಾಜ್ಯದಲ್ಲಿ ಕಳೆದ 24ಗಂಟೆಯಲ್ಲಿ 5,619 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 1,51,449ಕ್ಕೆ ಏರಿಕೆಯಾಗಿದೆ.




