Kannada NewsKarnataka NewsLatest

ಬೆಳಗಾವಿಯಲ್ಲಿ ಭಾನುವಾರ ನೃತ್ಯ ವೈವಿಧ್ಯ

 ಶಾಂತಲಾ ನಾಟ್ಯಾಲಯದ 32ನೇ ವಾರ್ಷಿಕೋತ್ಸವ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಇಲ್ಲಿಯ ಶಾಂತಲಾ ನಾಟ್ಯಾಲಯದ 32ನೇ ವಾರ್ಷಿಕೋತ್ಸವದ ನಿಮಿತ್ತ ಕೇಂದ್ರ ಸರಕಾರದ ಸಂಸ್ಕೃತಿ ಸಚಿವಾಲಯದ ಸಹಯೋಗದೊಂದಿಗೆ ಭಾನುವಾರ ಬೆಳಗಾವಿಯಲ್ಲಿ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಲಿದೆ.

ಸಂಜೆ 5.30ರಿಂದ ಕೋನವಾಳ ಗಲ್ಲಿಯ ಲೋಕಮಾನ್ಯ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯುವುದು. ಅಟಲಜೀ ಜನಸ್ನೇಹಿ ಕೇಂದ್ರದ ನಿರ್ದೇಶಕರಾದ ಐಎಎಸ್ ಅಧಿಕಾರಿ ಗಂಗೂಬಾಯಿ ಮಾನಕರ್, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಸದಸ್ಯೆ, ವಿದ್ವಾನ್ ಹೇಮಾ ವಾಗ್ಮೋಡೆ ಹಾಗೂ ಹಿರಿಯ ಪತ್ರಕರ್ತ, ಪ್ರಗತಿವಾಹಿನಿ ಸಂಪಾದಕ ಎಂ.ಕೆ.ಹೆಗಡೆ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಶಾಂತಲಾ ನಾಟ್ಯಾಲಯದ ನಿರ್ದೇಶಕಿ ರೇಖಾ ಹೆಗಡೆ ತಿಳಿಸಿದ್ದಾರೆ.​

ವಿಚ್ಛೇದನ ವದಂತಿ ನಡುವೆಯೇ ಹಾಟ್ ಫೋಟೋಗಳ ಮೂಲಕ ಗಮನ ಸೆಳೆದ ಸಮಂತಾ

Home add -Advt

Related Articles

Back to top button