ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಅಟ್ಟಹಾಸ ಮುಂದುವರೆಸಿದ್ದು, ಒಂದೇ ದಿನ ಬರೋಬ್ಬರಿ 6,088 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ಸೋಂಕಿತರ ಸಂಖ್ಯೆ ಭಾರತದಲ್ಲಿ 1,18,447ಕ್ಕೆ ತಲುಪಿದ್ದು, ಕಳೆದ 24 ಗಂಟೆಯಲ್ಲಿ 148 ಮಂದಿ ಸಾವನ್ನಪ್ಪಿದ್ದಾರೆ.
ಈವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ 3,583 ಮಂದಿ ಬಲಿಯಾಗಿದ್ದಾರೆ. ಒಟ್ಟು 48,533 ಮಂದಿ ಕೊರೊನಾಗೆ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 66,330 ಸೋಂಕಿತರು ಇನ್ನೂ ಕೊರೊನಾದಿಂದ ಬಳಲುತ್ತಿದ್ದಾರೆ. ಕರ್ನಾಟಕದಲ್ಲಿ ಈವರೆಗೆ 1,605 ಮಂದಿಗೆ ಸೋಂಕು ತಗುಲಿದ್ದು, ಸಾವಿನ ಸಂಖ್ಯೆ 41ರಲ್ಲಿಯೇ ಇದೆ. ಒಟ್ಟು 571 ಮಂದಿ ಸೋಂಕಿನಿಂದ ಗುಣಮುಖರಾಗಿ ಮನೆ ಸೇರಿದ್ದಾರೆ.
ಮಹಾರಾಷ್ಟ್ರ ದೇಶದಲ್ಲಿ ಅತಿ ಹೆಚ್ಚು ಕೊರೊನಾ ಸೋಂಕು ಹರಡುತ್ತಿರುವ ರಾಜ್ಯವಾಗಿದ್ದು, ಇಂದು ಒಂದೇ ದಿನ ಮಹಾರಾಷ್ಟ್ರದಲ್ಲಿ 2 ಸಾವಿರಕ್ಕೂ ಅಧಿಕ ಹೊಸ ಕೊರೊನಾ ಪ್ರಕರಣ ವರದಿಯಾಗಿದೆ. ಈವರೆಗೆ 41,642 ಮಂದಿ ಸೋಂಕಿಗೆ ತುತ್ತಾಗಿದ್ದು, 1,454 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. 11,726 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಮುಂಬೈ ಒಂದರಲ್ಲೇ ಈವರೆಗೆ 25 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿದೆ.
ತಮಿಳುನಾಡಿನಲ್ಲಿ ಈವರೆಗೆ 13,967 ಮಂದಿಗೆ ಕೊರೊನಾ ತಗುಲಿದ್ದು, 95 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇತ್ತ ಗುಜರಾತ್‍ನಲ್ಲಿ 12,910 ಮಂದಿ ಸೋಂಕಿಗೆ ತುತ್ತಾಗಿದ್ದು, 773 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 11,659 ಮಂದಿ ಕೊರೊನಾಗೆ ತುತ್ತಾಗಿದ್ದು, 194 ಮಂದಿ ಮೃತಪಟ್ಟಿದ್ದಾರೆ. ಸುಮಾರು 5,567 ಮಂದಿ ಸೋಂಕಿನಿಂದ ಗುಣವಾಗಿದ್ದಾರೆ.
ರಾಜಸ್ಥಾನದಲ್ಲಿ 6,227 ಮಂದಿಗೆ ಸೋಂಕು ತಗುಲಿದ್ದು, 151 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದಲ್ಲಿ 5,981 ಮಂದಿ ಸೋಂಕಿಗೆ ತುತ್ತಾಗಿದ್ದು, 271 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆ 5,515ಕ್ಕೆ ಏರಿಕೆಯಾಗಿದ್ದು, 138 ಮಂದಿ ಮೃತಪಟ್ಟಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ