Latest

ಕೊಂಚ ಇಳಿಕೆ ಕಂಡ ಕೊರೊನಾ ಸೋಂಕಿತರ ಪತ್ತೆ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕಳೆದ ಮೂರ್ನಾಲ್ಕು ದಿನಗಳಲ್ಲಿ ದೇಶದಲ್ಲಿ ಕೊರೊನಾ ಸೋಂಕಿತರ ಪತ್ತೆಯಲ್ಲಿ ಸ್ವಲ್ಪ ಇಳಿಕೆ ಕಂಡುಬರುತ್ತಿದ್ದು, ಕೊಂಚ ಆಶಾ ಭಾವನೆ ಮೂಡುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 61,267 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದೆ.

ಕಳೆದ ಒಂದು ದಿನದಲ್ಲಿ 884 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,03,569ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 9,19,023 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 56,62,491 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ನಿನ್ನೆ ಒಂದೇ ದಿನ 10,89,403 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈ ವರೆಗೆ 8,10,71,797 ಜನರಿಗೆ ಕೊವಿಡ್ ಟೆಸ್ಟ್ ನಡೆಸಲಾಗಿದೆ ಎಂದು ಐಸಿಎಂ ಆರ್ ತಿಳಿಸಿದೆ.

Home add -Advt

Related Articles

Back to top button