Latest

64 ಲಕ್ಷಕ್ಕೂ ಅಧಿಕ ಕೊವಿಡ್ ಸೋಂಕಿತರು ಗುಣಮುಖ; ಆಸ್ಪತ್ರೆಯಿಂದ ಡಿಸ್ಚಾರ್ಜ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಏರುತ್ತಿದ್ದು, ದೇಶದಲ್ಲಿ 64,53,780 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 63,371 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 73,70,469 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 895 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,12,161ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 8,04,528 ಕೊವಿಡ್ ಸಕ್ರಿಯ ಪ್ರಕರಣಗಳಿವೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button