ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 63,509 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 72,39,390 ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24 ಗಂಟೆಯಲ್ಲಿ 730 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,10,586ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ 8,26,876 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 63,01,928 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ