Latest

25 ಲಕ್ಷ ಗಡಿ ದಾಟಿದ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24ಗಂಟೆಯಲ್ಲಿ 65,002 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 25,26,193ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 996 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ಇದೂವರೆಗೂ ದೇಶದಲ್ಲಿ 49,036 ಜನ ಕೊರೊನಾಗೆ ಸಾವನ್ನಪ್ಪಿದ್ದಾರೆ. ದೇಶದಲ್ಲಿ 6,68,220 ಸಕ್ರಿಯ ಪ್ರಕರಣಗಳಿದ್ದು, 18,08,937 ಮಂದಿ ಕೊರೊನಾ ವೈರಸ್ ಗೆದ್ದು ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ನಿನ್ನೆ ಒಂದೇ ದಿನದಲ್ಲಿ 8,68,679 ಮಂದಿಯ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಈ ಮೂಲಕ 2,85,63,095 ಮಂದಿಯನ್ನು ಈವರೆಗೆ ಕೋವಿಡ್ 19 ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button