Latest

ರಾಜ್ಯದಲ್ಲಿ ಇಂದು ಒಂದೇ ದಿನ 69 ಜನರಲ್ಲಿ ಕೊರೊನಾ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಒಂದೇ ದಿನ ರಾಜ್ಯದಲ್ಲಿ 69 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1056ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 69 ಜನರಲ್ಲಿ ಕೊರೊನಾ ಪಾಸಿಟೀವ್ ಪತ್ತೆಯಾಗಿದೆ. ಬೀದರ್ ನಲ್ಲಿ ಕೊರೊನಾ ಸೋಂಕಿಗೆ 51 ವರ್ಷದ ವ್ಯಕ್ತಿಯೊಬ್ಬರು ಬಲಿಯಾಗಿದ್ದು, ಈ ಮೂಲಕ ಕೊರೊನಾಗೆ ಕರ್ನಾಟಕದಲ್ಲಿ ಬಲಿಯಾದವರ ಸಂಖ್ಯೆ 36ಕ್ಕೆ ಏರಿಕೆಯಾಗಿದೆ.

ದಕ್ಷಿಣ ಕನ್ನಡ 16, ಬೆಂಗಳೂರು 13, ಬೀದರ್ 7, ಹಾಸನ 7, ಮಂಡ್ಯ 13, ಉಡುಪಿ 5, ಕಲಬುರಗಿ 3, ಚಿತ್ರದುರ್ಗದಲ್ಲಿ 2, ಶಿವಮೊಗ್ಗ, ಕೋಲಾರ, ಬಾಗಲಕೋಟೆಯಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ. ಇನ್ನು ರಾಜ್ಯದಲ್ಲಿ 536 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button