
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಕಳೆದ 24 ಗಂಟೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, 69,921 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 36,91,167ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಒಂದೇ ದಿನ ದೇಶದಲ್ಲಿ 819 ಮಂದಿ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 65,288ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 64,442 ಮಂದಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ದೇಶದಲ್ಲಿ ಈವರೆಗೆ 28,39,883 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ದೇಶದಲ್ಲಿ ಇನ್ನೂ 7,85,996 ಸಕ್ರಿಯ ಪ್ರಕರಣಗಳು ಇವೆ.