Latest

1,08,334ಕ್ಕೆ ಏರಿಕೆಯಾಯ್ತು ಕೊವಿಡ್ ಗೆ ಬಲಿಯಾದವರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 70 ಲಕ್ಷ ಗಡಿದಾಟಿದ್ದು, ಕಳೆದ 24 ಗಂಟೆಯಲ್ಲಿ 74,383 ಜನರಲ್ಲಿ ಹೊಸದಾಗಿ ಕೊರೊನಾ ಸೋಂಕು ಪತ್ತೆಯಾಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇದೀಗ 70,53,807 ಕ್ಕೆ ಏರಿಕೆಯಾಗಿದೆ. ಕಳೆದ ಒಂದು ದಿನದಲ್ಲಿ ದೇಶದಲ್ಲಿ 918 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,08,334ಕ್ಕೆ ಏರಿಕೆಯಾಗಿದೆ.

Home add -Advt

ದೇಶದಲ್ಲಿ ಇನ್ನೂ 8,67,496 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 60,77,977 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

 

Related Articles

Back to top button