Latest

51,01,398 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 70,589 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 61,45,292ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 776 ಜನರುಸೋಂಕಿಗೆ ಬಲಿಯಾಗಿದ್ದು, ಈ ವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 96,318ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ 9,47,576 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 51,01,398 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಒಂದೇ ದಿನ 11,42,811 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದೆ. ದೇಶದಲ್ಲಿ ಈವರೆಗೆ 7,31,10,041 ಜನರಿಗೆ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದೆ ಎಂದು ಐಸಿಎಂ ಆರ್ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button