ಪ್ರಗತಿವಾಹಿನಿ ಸುದ್ದಿ; ಕಾರವಾರ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 74ಕ್ಕೆ ಏರಿಕೆಯಾಗಿದೆ.
ಉತ್ತರ ಕನ್ನಡದಲ್ಲಿ ರೋಗಿ ನಂಬರ್ 36ರ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಕೊರೊನಾ ಸೋಂಕು ತಗುಲಿದೆ. ಈ ಮೂಲಕ ಒಂದೇ ರೋಗಿಯಿಂದ ಮೂವರಿಗೆ ಕೊರೊನಾ ಹರಡಿದೆ. ಚಿಕ್ಕಬಳ್ಳಾಪುರದ ರೋಗಿಯಿಂದ ಐವರಿಗೆ ಕೊರೊನಾ ಸೋಂಕು ಹರಡಿರುವುದು ತಿಳಿದುಬಂದಿದೆ.
ಉತ್ತರ ಕನ್ನಡ ಮೂಲದ ವ್ಯಕ್ತಿ ಮಾರ್ಚ್ 21 ರಂದು ದುಬೈಯಿಂದ ಮಂಗಳೂರಿಗೆ ಆಗಮಿಸಿ ಭಟ್ಕಳಕ್ಕೆ ತೆರಳಿದ್ದರು. ಇವರ ಸಂಪರ್ಕಕ್ಕೆ ಬಂದಿದ್ದರಿಂದ 54 ವರ್ಷದ ಪತ್ನಿ, 28 ವರ್ಷದ ಮಗಳು ಹಾಗೂ 23 ವರ್ಷದ ಮತ್ತೊಬ್ಬ ಮಗಳಿಗೂ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಕುಟುಂಬದ ಎಲ್ಲ ಸದಸ್ಯರನ್ನು ಉತ್ತರ ಕನ್ನಡದ ಆಸ್ಪತ್ರೆಗೆ ದಾಖಲಿಸಲಾಗಿದೆ.
21 ವರ್ಷದ ಬೆಂಗಳೂರಿನ ನಿವಾಸಿಯಲ್ಲೂ ಕೊರೊನ ದೃಢಪಟ್ಟಿದ್ದು, ಇವರು ಲಂಡನ್ ಗೆ ಪ್ರಯಾಣ ಬೆಳೆಸಿ ಮಾರ್ಚ್ 17ರಂದು ಭಾರತಕ್ಕೆ ಹಿಂದಿರುಗಿದ್ದರು. ಇವರ 25 ವರ್ಷದ ಮಗನಿಗೂ ಸೋಂಕು ತಗುಲಿದೆ. ಲಂಡನ್ ನಿಂದ ವಾಪಸ್ ಆಗಿದ್ದ 63 ವರ್ಷದ ಬೆಂಗಳೂರು ಮಹಿಳೆಯಲ್ಲಿಯೂ ಸೋಂಕು ಪತ್ತೆಯಾಗಿದೆ.
ಇನ್ನು ಚಿಕ್ಕಬಳ್ಳಾಪುರದ ನಿವಾಸಿಯಾಗಿದ್ದ 70 ವರ್ಷದ ನಿವಾಸಿಯಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಇವರ ಸಂಪರ್ಕದಲ್ಲಿದ್ದ 32 ವರ್ಷದ ಮಹಿಳೆ, 38 ವರ್ಷದ ಪುರುಷ, 18 ವರ್ಷದ ಯುವಕನಲ್ಲೂ ಸೋಂಕು ಪತ್ತೆಯಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ