Latest

ದೇಶದಲ್ಲಿ ಒಂದೇ ದಿನದಲ್ಲಿ 7,964 ಕೊರೊನಾ ಸೋಂಕಿತರು ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನಾಲ್ಕನೇ ಹಂತದ ಲಾಕ್ ಡೌನ್ ಅವಧಿ ಮುಗಿಯಲು ಇನ್ನು ಒಂದು ದಿನ ಮಾತ್ರ ಬಾಕಿಯಿದೆ. ಆದಾಗ್ಯೂ ದೇಶಾದ್ಯಂತ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 7 ಸಾವಿರಕ್ಕೂ ಹೆಚ್ಚು‌ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.

ಕಳೆದ ಎರಡು ದಿನಗಳಿಂದ ಪ್ರತಿ ದಿನ 7 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿವೆ. ನಿನ್ನೆ ಒಂದೇ ದಿನ ದೇಶದಲ್ಲಿ 7,964 ಪ್ರಕರಣಗಳು ಕಂಡುಬಂದಿವೆ. ಇದರಿಂದ ಭಾರತದ ಕೊರೋನಾ ವೈರಸ್ ಪೀಡಿತರ ಸಂಖ್ಯೆ 1,73,763ಕ್ಕೆ ಏರಿಕೆಯಾಗಿದೆ.

Home add -Advt

ಅಲ್ಲದೇ ಒಂದೇ ದಿನ ಕೊರೊನಾದಿಂದ 265 ಜನ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೊನಾದಿಂದ ಸತ್ತವರ ಸಂಖ್ಯೆ 4,971ಕ್ಕೆ ಏರಿಕೆಯಾಗಿದೆ. ಕೊರೋನಾದಿಂದ ಈವರೆಗೆ 82,370 ಜನ ಗುಣಮುಖ ಆಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿಗಳು ತಿಳಿಸಿವೆ.

Related Articles

Back to top button