ಉತ್ತರ ಕನ್ನಡ ಜಿಲ್ಲೆಯಲ್ಲಿ 20 ದಿನಗಳ ಬಳಿಕ ಮತ್ತೆ ಕಾಣಿಸಿಕೊಂಡ ಕೊರೊನಾ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಇಂದು 8 ಜನರಲ್ಲಿ ಕೊರೊನಾ ಸೋಂಕು ಹೊಸದಾಗಿ ಪತ್ತೆಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 659ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಉತ್ತರ ಕನ್ನಡ ಜಿಲ್ಲೆಯಲ್ಲಿ 20 ದಿನಗಳ ಬಳಿಕ ಕೊರೊನಾ ಸೋಂಕು ಮತ್ತೆ ಕಾಣಿಸಿಕೊಂಡಿದೆ. ಭಟ್ಕಳ ಮೂಲದ 18 ವರ್ಷದ ಯುವತಿಯಲ್ಲಿ ಸೋಂಕು ದೃಢಪಟ್ಟಿದ್ದು, ಮಂಗಳೂರು ಹೊರವಲಯದ ಫಸ್ಟ್ ನ್ಯೂರೊ ಆಸ್ಪತ್ರೆಗೆ ಹೋಗಿ ಬಂದಿದ್ದ ಮಹಿಳೆಗೆ ಏ.27ರಂದು ಜ್ವರ ಬಂದು ಆಸ್ಪತ್ರೆಗೆ ದಾಖಲಾಗಿದ್ದರು. ಗಂಟಲು ದ್ರವ ಪರೀಕ್ಷೆ ನಡೆಸಿದಾಗ ಆಕೆಗೆ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಮೂಲಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಬೆಂಗಳೂರು 3, ಬಾಗಲಕೋಟೆ 2, ಬಳ್ಳಾರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ಬೆಳಕಿಗೆ ಬಂದಿವೆ. ಇಂದು ಮೂವರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ವಿಜಯಪುರದಲ್ಲಿ 62 ವರ್ಷದ ಮಹಿಳೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಇವರು ಅಸ್ತಮಾ, ಶ್ವಾಸಕೋಶ ಕಾಯಿಲೆ ಕಾಯಿಲೆಗಳಿಂದ ಬಳಲುತ್ತಿದ್ದು, ಇಂದು ಕೊನೆಯುಸಿರೆಳೆದಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಈ ವರೆಗೆ ಕೊರೊನಾ ಸೋಂಕಿಗೆ 28 ಜನ ಬಲಿಯಾಗಿದ್ದಾರೆ.

ಸೋಂಕಿತರ ವಿವರ:
1. ರೋಗಿ 652: ಬೆಂಗಳೂರಿನ 30 ವರ್ಷದ ಮಹಿಳೆ. ಸೋಂಕು ಸಂಪರ್ಕ ಮಾಹಿತಿಯನ್ನು ಪತ್ತೆ ಹಚ್ಚಲಾಗುತ್ತಿದೆ.
2. ರೋಗಿ 653: ಬೆಂಗಳೂರಿನ 40 ವರ್ಷದ ಪುರುಷ. ರೋಗಿ 420ರ ಜೊತೆ ಸಂಪರ್ಕ
3. ರೋಗಿ 654: ಬೆಂಗಳೂರಿನ 45 ವರ್ಷದ ಪುರುಷ. ಜ್ವರದ ಲಕ್ಷಣಗಳು ಕಾಣಿಸಿಕೊಂಡಿವೆ.
4. ರೋಗಿ 655: ಬಾಗಲಕೋಟೆಯ 29 ವರ್ಷದ ಮಹಿಳೆ. ರೋಗಿ 367 ಮತ್ತು 368ರ ಸಂಪರ್ಕದಲ್ಲಿದ್ದರು.
5. ರೋಗಿ 656: ಬಾಗಲಕೋಟೆಯ 29 ವರ್ಷದ ಪುರುಷ. ರೋಗಿ 367 ಮತ್ತು 368ರ ಸಂಪರ್ಕದಲ್ಲಿದ್ದರು.
6. ರೋಗಿ 657: ಬಳ್ಳಾರಿ 43 ವರ್ಷದ ಪುರುಷ. ಉತ್ತರಾಖಂಡಕ್ಕೆ ಪ್ರಯಾಣದ ಹಿನ್ನೆಲೆ
7. ರೋಗಿ 658: ದಕ್ಷಿಣ ಕನ್ನಡ 51 ವರ್ಷದ ಪುರುಷ. ರೋಗಿ 536ರ ಜೊತೆ ಸಂಪರ್ಕದಲ್ಲಿದ್ದರು.
8. ರೋಗಿ 659: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ 28 ವರ್ಷದ ಮಹಿಳೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button