Latest

ಒಂದೇ ದಿನದಲ್ಲಿ 83,341 ಜನರಲ್ಲಿ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಮಹಾಮಾರಿ ಅಟ್ಟಹಾಸ ಮುಂದುವರೆಸಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 83,341 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 39 ಲಕ್ಷ ಗಡಿ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ 24 ಗಂಟೆಯಲ್ಲಿ 83,341 ಕೊವಿಡ್ ಕೇಸ್ ಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 39,36,347ಕ್ಕೆ ಏರಿಕೆಯಾಗಿದೆ.

Home add -Advt

ಮಹಾಮಾರಿಗೆ ಕಳೆದ 24 ಗಂಟೆಗಳಲ್ಲಿ 1,096 ಜನ ಬಲಿಯಾಗಿದ್ದು, ಇದುವರೆಗೂ ದೇಶದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 68,472ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 30,37,151 ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 11,69,765ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 4,66,79,145 ಜನರನ್ನು ಈ ವರೆಗೆ ಕೊವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.

Related Articles

Back to top button