Latest

ದೇಶದಲ್ಲಿ ಮುಂದುವರಿದ ಕೊರೊನಾ ಅಟ್ಟಹಾಸ; 90 ಸಾವಿರ ಗಡಿ ದಾಟಿದ ಸಾವಿನ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24ಗಂಟೆಯಲ್ಲಿ 83,347 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 56,46,011 ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿಗೆ 1,085 ಜನರು ಬಲಿಯಾಗಿದ್ದಾರೆ. ಈ ವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 90,020ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Home add -Advt

ದೇಶದಲ್ಲಿ 9,68,377 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 45,87,614 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ನಿನ್ನೆ ಒಂದೇ ದಿನ 9,53,683 ಜನರನ್ನು ಕೊರೊನಾ ಸ್ಯಾಂಪಲ್ ಟೆಸ್ಟ್ ಗೆ ಒಳಪಡಿಸಲಾಗಿದೆ. ಈ ಮೂಲಕ ಇದೂವರೆಗೂ 6,62,79,462 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂ ಆರ್ ತಿಳಿಸಿದೆ.

Related Articles

Back to top button