ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಆರ್ಭಟ ಮುಂದುವರೆದಿದ್ದು, ಇಂದಿಗೆ ನಾಲ್ಕನೇ ಹಂತದ ಲಾಕ್ ಡೌನ್ ಅವಧಿ ಮುಕ್ತಾಯವಾಗಿದ್ದರೂ ಸೋಂಕು ನಿಯಂತ್ರಣಕ್ಕೆ ಬಂದಿಲ್ಲ. ಕಳೆದ 24 ಗಂಟೆಯಲ್ಲಿ 8,380 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1.82 ಲಕ್ಷಕ್ಕೇರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯಿಂದ ತಿಳಿದು ಬಂದಿದೆ.
ಕಳೆದ ನಾಲ್ಕು ದಿನಗಳಿಂದ ಪ್ರತಿನಿತ್ಯ ಸೋಂಕಿತರ ಸಂಖ್ಯೆ 7,000 ಗಡಿ ದಾಟುತ್ತಲೇ ಇದೆ. ಹೀಗಾಗಿ ಇದುವರೆಗೂ ದೇಶದಲ್ಲಿ 1,82,143 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜತೆಗೆ ಮಾರಕ ಕೊರೋನಾಗೆ ಒಂದೇ ದಿನದಲ್ಲಿ 193 ಜನ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 5,164ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ ಮೇ 10ರಿಂದ ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ ಪ್ರತಿನಿತ್ಯ ನಾಲ್ಕು ಸಾವಿರಕ್ಕಿಂತ ಹೆಚ್ಚಾಗುತ್ತಲೇ ಇದೆ. ಮೇ 10ರಂದು 4,213 ಜನರಿಗೆ, ಮೇ 11ರಂದು 3,064 ಮಂದಿಗೆ, ಮೇ 12 ರಂದು 3,525 ಜನರಿಗೆ, ಮೇ13ರಂದು 3,722 ಮಂದಿಗೆ ಹಾಗೂ ಮೇ 14ರಂದು 3,967 ಜನರಿಗೆ, ಮೇ 15ರಂದು 3,970 ಮಂದಿಗೆ, ಮೇ 16ರಂದು 4,987 ಜನರಿಗೆ, ಮೇ 17ರಂದು 5,242, ಮೇ 18ರಂದು 4,970, ಮೇ 19ರಂದು 5,611, ಮೇ 20ರಂದು 5,609, ಮೇ 21ರಂದು 6,088, ಮೇ 22ರಂದು 6,654, ಮೇ 23ರಂದು 6,767, ಮೇ 24ರಂದು 6,977, ಮೇ 25ರಂದು 6,535, ಮೇ 26ರಂದು 6,387, ಮೇ 27ರಂದು 6,566, ಮೇ 28ರಂದು 7,466 ಮತ್ತು ಮೇ 29ರಂದು 7,964 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ