Latest

40 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮತ್ತೆ ಒಂದೇ ದಿನದಲ್ಲಿ ದಾಖಲೆ ಪ್ರಮಾನದಲ್ಲಿ ಕೊರೊನಾ ಪ್ರಕರಣ ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ 86,432 ಮಂದಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 40 ಲಕ್ಷದ ಗಡಿ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 40,23,179ಕ್ಕೆ ತಲುಪಿದೆ. ಒಂದೇ ದಿನದಲ್ಲಿ 1,089 ಸೋಂಕಿತರು ಬಲಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ 67,561ಕ್ಕೆ ಏರಿಕೆಯಾಗಿದೆ.

Home add -Advt

ಒಟ್ಟು ದೇಶದಲ್ಲಿ 31,07,223 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಗಳಲ್ಲಿ 10,59,346 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, ಇದುವವರೆಗೂ 4,77,38,491 ಜನರು ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದಾರೆ.

Related Articles

Back to top button