ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24ಗಂಟೆಯಲ್ಲಿ 86,508 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 57,32,519ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ 24ಗಂಟೆಯಲ್ಲಿ ದೇಶದಲ್ಲಿ 1,129 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 91,149ಕ್ಕೆ ಏರಿಕೆಯಾಗಿದೆ.
ಭಾರತದಲ್ಲಿ 9,66,382 ಕೊರೊನಾ ಸಕ್ರಿಯ ಪ್ರಕರಣಗಳಿದ್ದು, 46,74,988 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಒಂದೇ ದಿನ 11,56,569 ಜನರಿಗೆ ಕೊರೊನಾ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈ ವರೆಗೆ 6,74,36,031 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂ ಆರ್ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ