Latest

63 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24ಗಂಟೆಯಲ್ಲಿ 86,821 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 63,12,585ಕ್ಕೆ ಏರಿಕೆಯಾಗಿದೆ.

ಕಳೆದ ಒಂದೇ ದಿನದಲ್ಲಿ ದೇಶದಲ್ಲಿ 1,181 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 98,678ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Home add -Advt

ದೇಶದಲ್ಲಿ 9,40,705 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 52,73,202 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಒಂದೇ ದಿನ 7,56,19,781 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ಈ ವರೆಗೆ ದೇಶದಲ್ಲಿ 14,23,052 ಜನರಿಗೆ ಕೊವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂ ಆರ್ ಮಾಹಿತಿ ನೀಡಿದೆ.

Related Articles

Back to top button