ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೊರೊನಾ ಅಟ್ಟಹಾಸ ದೇಶದಲ್ಲಿ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 88,600 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 59,92,533ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,124 ಜನರು ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 94,503ಕ್ಕೆ ಏರಿಕೆಯಾಗಿದೆ.
ಇನ್ನು ಸೆ.26ರಂದು 9,87,861 ಜನರಿಗೆ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಿಸಲಾಗಿದ್ದು, ದೇಶದಲ್ಲಿ ಈ ವರೆಗೆ 7,12,57,836 ಜನರಿಗೆ ಕೊವಿಡ್ ಪರೀಕ್ಷೆ ನಡೆಸಲಾಗಿದೆ ಎಂದು ಐಸಿಎಂ ಆರ್ ತಿಳಿಸಿದೆ.
ದೇಶದಲ್ಲಿ 9,56,402 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 49,41,628 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ