
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಸೋಂಕಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು. ಬೀದರ್ ನಲ್ಲಿ ತೀವ್ರ ಉಸಿರಾಟದ ತೊಂದರೆಯಿಂದ 82 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾಗೆ ಸಾವನ್ನಪ್ಪಿದವರ ಸಂಖ್ಯೆ 25ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಇಂದು 9 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ತುಮಕೂರು 2, ವಿಜಯಪುರದಲ್ಲಿ 2, ಬೆಳಗಾವಿ, ಬೆಂಗಳೂರು, ಬಾಗಲಕೋಟೆ, ಚಿಕ್ಕಬಳ್ಳಾಪುರದದಲ್ಲಿ ತಲಾ 1 ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕು ಪೀಡಿತರ ಸಂಖ್ಯೆ 598ಕ್ಕೆ ಏರಿದೆ.
ಬೆಳಗಾವಿಯಲ್ಲಿ 23 ವರ್ಷದ ಯುವಕನಿಗೆ ಸೋಂಕು ತಗುಲಿದ್ದು, ತಬ್ಲಿಗಿ ಸಂಪರ್ಕದಿಂದ ಯುವಕನಿಗೆ ಕೊರೊನಾ ತಗುಲಿದೆ ಎಂದು ತಿಳಿದುಬಂದಿದೆ.
ವಿಜಯಪುರದಲ್ಲಿ ಮಹಾಮಾರಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇಂದು 22 ವರ್ಷದ ಯುವಕ ಹಾಗೂ 55 ವರ್ಷದ ಪುರುಷರ ನಲ್ಲಿ ಕಾಣಿಸಿಕೊಂಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ