Latest

ದೇಶದಲ್ಲಿ ಒಂದೇ ದಿನ 90,802 ಜನರಲ್ಲಿ ಸೋಂಕು ಪತ್ತೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೊಸ ದಾಖಲೆ ಬರೆಯುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 90,802 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 42,04,614ಕ್ಕೆ ಏರಿಕೆ ಆಗಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 1,016 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂಲಕ ಇದುವರೆಗೂ ಕೊರೊನಾ ಸೋಂಕಿನಿಂದ 71,642 ಮಂದಿ ಮೃತಪಟ್ಟಿದ್ದಾರೆ.

42,04,614 ಕೊರೊನಾ ಸೋಂಕಿತರ ಪೈಕಿ 8,82,542 ಸಕ್ರಿಯ ಪ್ರಕರಣಗಳಿದ್ದು, 32,50,429 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಕೊರೊನಾದಿಂದ ಚೇತರಿಸಿಕೊಂಡವರ ಪ್ರಮಾಣವೂ ದಾಖಲೆ ಮಟ್ಟದಲ್ಲಿ ಹೆಚ್ಚಿದೆ.

ಕೊರೊನಾ ದೇಶಗಳ ಪಟ್ಟಿಯಲ್ಲಿ ಭಾರತ ಬ್ರೆಜಿಲ್ ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಜಿಗಿದಿದೆ. ಮರಣಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button