Latest

6,36,61,060 ಜನರಿಗೆ ಕೊವಿಡ್ ಟೆಸ್ಟ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 92,605 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 54,00,620ಕ್ಕೆ ಏರಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿಗೆ 1,133 ಜನರು ಬಲಿಯಾಗಿದ್ದಾರೆ. ಈ ಮೂಲಕ ಈ ವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 86,752ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Home add -Advt

ದೇಶದಲ್ಲಿ 10,10,824 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 43,03,044 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ 12,06,806 ಜನರಲ್ಲಿ ಕೊವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ಈವರೆಗೆ 6,36,61,060 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದೆ ಎಂದು ಐಸಿಎಂ ಆರ್ ತಿಳಿಸಿದೆ.

Related Articles

Back to top button