Latest

9,73,175 ಕೊವಿಡ್ ಸಕ್ರಿಯ ಪ್ರಕರಣ, 36,24,197 ಜನ ಗುಣಮುಖ

ಪ್ರಗತಿವಾಹಿನಿ ಸುದ್ದಿ; ನವದೆಹಲಿ:  , ಕಳೆದ 24 ಗಂಟೆಯಲ್ಲಿ ದೇಶದಲ್ಲಿ 94,372 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 47 ಲಕ್ಷ ಗಡಿ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಕಳೆದ ಒಂದೇ ದಿನದಲ್ಲಿ 94,372 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 47,54,357ಕ್ಕೆ ಏರಿಕೆಯಾಗಿದೆ.

Home add -Advt

ಒಂದೇ ದಿನದಲ್ಲಿ ದೇಶದಲ್ಲಿ ಮಹಾಮಾರಿಗೆ 1,114 ಜನರು ಬಲಿಯಾಗಿದ್ದಾರೆ. ಈವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 78,586ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 9,73,175 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 36,24,197 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Related Articles

Back to top button