Cancer Hospital 2
Beereshwara 36
LaxmiTai 5

46 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಒಂದೇ ದಿನದಲ್ಲಿ 97,570 ಜನರಲ್ಲಿ ಸೋಂಕು ಪತ್ತೆ

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 97,570 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 46,59,985ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Emergency Service

ಇನ್ನು ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿಗೆ 1,201 ಜನರು ಬಲಿಯಾಗಿದ್ದಾರೆ. ಈ ವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 77,472ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ 9,58,316 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 36,24,197 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

Bottom Add3
Bottom Ad 2