Latest

51 ಲಕ್ಷ ಗಡಿ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 97,894 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 51 ಲಕ್ಷ ಗಡಿ ದಾಟಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಒಂದೇ ದಿನದಲ್ಲಿ 97,894 ಜನರಲ್ಲಿ ಕೊವಿಡ್ ವೈರಸ್ ಪತ್ತೆಯಾಗಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 51,18,254ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಮಹಾಮಾರಿಗೆ 1,132 ಜನರು ಬಲಿಯಾಗಿದ್ದಾರೆ. ಈ ವರೆಗೆ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 83,198ಕ್ಕೆ ಏರಿಕೆಯಾಗಿದೆ. ದೇಶದಲ್ಲಿ 10,09,976 ಕೊವಿಡ್ ಸಕ್ರಿಯ ಪ್ರಕರಣಗಳಿದ್ದು, 40,25,080 ಸೋಂಕಿತರು ಕೊರೊನಾದಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button