ಪ್ರಗತಿವಾಹಿನಿ ಸುದ್ದಿ; ನವದೆಹಲಿ: ದೇಶಾದ್ಯಂತ ಕೊರೊನಾ ಅಟ್ಟಹಾಸ ಮುಂದುವರೆದಿದ್ದು, ವಿಶ್ವದಲ್ಲಿ ಅತಿ ಹೆಚ್ಚು ಕೊರೋನಾ ಪೀಡಿತರ ಸಂಖ್ಯೆಯಲ್ಲಿ ಈಗಾಗಲೇ ಸ್ಪೇನ್ ಹಿಂದಿಕ್ಕಿ, 5ನೇ ಸ್ಥಾನಕ್ಕೇರಿದೆ. 24 ಗಂಟೆಯಲ್ಲಿ ಭಾರತದಲ್ಲಿ 9,971 ಕೊರೋನಾ ಪ್ರಕರಣಗಳು ಪತ್ತೆಯಾದರೆ, 287 ಜನ ಮಹಾಮಾರಿ ಕೊರೋನಾಗೆ ಬಲಿಯಾಗಿದ್ದಾರೆ. ಈ ಮೂಲಕ ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 2,46,628ಕ್ಕೆ ಏರಿಕೆಯಾಗಿದೆ.
ಈ ಪೈಕಿ 1,20,406 ಆಕ್ಟೀವ್ ಕೊರೋನಾ ಪ್ರಕರಣಗಳಾಗಿವೆ. ಇನ್ನು, ಈವರೆಗೆ 1,19,293 ಜನ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಕಳೆದ 24 ಗಂಟೆಯಲ್ಲಿ 287 ಮಂದಿ ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಆ ಮೂಲಕ ಸಾವಿನ ಸಂಖ್ಯೆ 7000 ಕ್ಕೆ ಏರಿಕೆಯಾಗಿದೆ.
ದಿನದಿಂದ ದಿನಕ್ಕೆ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು ಭಾರೀ ಆತಂಕ ಸೃಷ್ಟಿಸಿದೆ. ಸದ್ಯ, ಸ್ಪೇನ್ನಲ್ಲಿ 2.40 ಲಕ್ಷ ಜನರಿಗೆ ಕೊರೋನಾ ವೈರಸ್ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ