ಪ್ರಗತಿವಾಹಿನಿ ಸುದ್ದಿ; ಬಾಗಲಕೋಟೆ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಪಕ್ಕದ ಕೇರಳ ರಾಜ್ಯದ ಕಾಸರಗೋಡದಿಂದ ಬಾಗಲಕೋಟೆ ಜಿಲ್ಲೆಗೆ ಆಗಮಿಸಿದ 87 ಜನರನ್ನು ಹೋಂ ಕ್ವಾರಂಟೈನ್ ನಲ್ಲಿ ಇಡಲಾಗಿದೆ.
ಗುಳೇದಗುಡ್ಡ ತಾಲೂಕಿನ ಆಸಂಗಿ ಗ್ರಾಮಕ್ಕೆ ಆಗಮಿಸಿದ 22 ಜನರನ್ನು ಆಶಾದೀಪ ಶಾಲೆಗೆ, ಬಾದಾಮಿ ತಾಲೂಕಿನ ಜಾಲಿಹಾಳ ಗ್ರಾಮಕ್ಕೆ ಆಗಮಿಸಿದ 23 ಜನರನ್ನು ಮ್ಯಾಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಇರಿಸಲಾಗಿದೆ.
ಅಲ್ಲದೇ ಹುನಗುಂದಕ್ಕೆ ಆಗಮಿಸಿದ 28 ಜನರನ್ನು ಮೆಟ್ರಿಕ್ ನಂತರದ ಬಾಲಕರ (ಪ.ಜಾ) ವಿದ್ಯಾರ್ಥಿ ನಿಲಯ ಮತ್ತು 14 ಜನರನ್ನು ಆದರ್ಶ ವಿದ್ಯಾಲಯ ಪರಿಹಾರ ಕೇಂದ್ರದಲ್ಲಿ ಹೋಮ್ ಕ್ವಾರಂಟೈನಲ್ಲಿ ಇರಿಸಿ ನಿಗಾ ವಹಿಸಲಾಗುತ್ತಿದೆ ಎಂದು ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮಾಹಿತಿ ನೀಡಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ