ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕೊರೊನಾ ಹಾಟ್ ಸ್ಪಾಟ್ ನಲ್ಲಿ ನಂಬರ್ 1 ಸ್ಥಾನದಲ್ಲಿರುವ ರಾಜಧಾನಿ ಬೆಂಗಳೂರಿನಾಧ್ಯಂತ ಸೀಲ್ ಡೌನ್ ಜಾರಿ ಮಾಡಲಾಗುತ್ತದೆ ಎಂಬ ಸುದ್ದಿಗಳು ಪ್ರಸಾರವಾದ ಬೆನ್ನಲ್ಲೇ ಸ್ಪಷ್ಟನೆ ನೀಡಿರುವ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಬೆಂಗಳೂರಿನ ಎರಡು ವಾರ್ಡ್ಗಳಲ್ಲಿ ಮಾತ್ರ ಸೀಲ್ ಡೌನ್ ಘೋಷಿಸಲಾಗಿದೆ. ಇತರೆಡೆಗಳಲ್ಲಿ ಲಾಕ್ ಡೌನ್ ಮಾತ್ರ ಕಟ್ಟುನಿಟ್ಟಾಗಿ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಭಾಸ್ಕರ್ ರಾವ್, ಕೆಲ ಮಾಧ್ಯಮಗಳಲ್ಲಿ ಬೆಂಗಳೂರಿನಲ್ಲಿ ಸಂಪೂರ್ಣ ಸೀಲ್ ಡೌನ್ ಘೋಷಿಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಇದು ಸತ್ಯಕ್ಕೆ ದೀರವಾದ ಸುದ್ದಿ. ಜನರು ಇಂತಹ ಸುಳ್ಳು ಸುದ್ದಿಯನ್ನು ನಂಬಬಾರದು ಎಂದು ಮನವಿ ಮಾಡಿದ್ದಾರೆ.
ವಾರ್ಡ್ ನಂಬರ್ 134 (ಬಾಪೂಜಿನಗರ) ಮತ್ತು 135 (ಪಾದರಾಯನಪುರ)ರಲ್ಲಿ ಮಾತ್ರ ಸೀಲ್ ಡೌನ್ ಘೋಷಿಸಲಾಗಿದೆ. ಇಲ್ಲಿ ಹೊಸ ಪ್ರಕರಣಗಳು ಕಂಡು ಬಂದಿದೆ. ಆ ಪ್ರದೇಶದಲ್ಲಿ ಸೋಂಕು ವ್ಯಾಪಿಸುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಸೀಲ್ ಡೌನ್ ಘೋಷಿಸಲಾಗಿದೆ.
ಇಲ್ಲಿ ಜನರಿಗೆ ಅಗತ್ಯ ವಸ್ತುಗಳನ್ನು ಮನೆಗೇ ಸರಬರಾಜು ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ. ಸೀಲ್ ಡೌನ್ ಇದೆ ಎಂದು ಈ ವಾರ್ಡ್ಗಳ ಜನರು ಆತಂಕ ಪಡುವ ಅಗತ್ಯ ಇಲ್ಲ ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ