Latest

ಕೊರೊನಾ ಸೋಂಕಿಗೆ ಮತ್ತೆ ಮೂವರು ಬಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿದ್ದು, ಇಂದು ಮತ್ತೆ ಮೂವರು ಬಲಿಯಾಗಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

39 ವರ್ಷದ ಪುರುಷ, 65 ವರ್ಷದ ವೃದ್ಧೆ ಹಾಗೂ 85 ವರ್ಷದ ವೃದ್ಧೆ ಇಂದು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಈ ಮೂಲಕ ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ ಹೆಚ್ಚುತ್ತಲೇ ಇದೆ.

ನಿನ್ನೆ ಕೊರೊನಾ ಸೋಂಕಿಗೆ 28 ವರ್ಷದ ಯುವಕ ಬಲಿಯಾಗಿದ್ದ ಇದರ ಬೆನ್ನಲ್ಲೇ ಇಂದು 39 ವರ್ಷದ ವ್ಯಕ್ತಿ ಕೂಡ ಕೊರೊನಾ ಸೋಂಕಿಗೆ ಸಾವನ್ನಪ್ಪಿರುವುದು ಜನರಲ್ಲಿ ಆತಂಕ ಹೆಚ್ಚಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button