Latest

ರಾಜಧಾನಿಯಲ್ಲಿ ಕಿಲ್ಲರ್ ಕೊರೊನಾಗೆ ಇಂದು 7 ಬಲಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕಿಲ್ಲರ್ ಕೊರೊನಾ ಕ್ಷಣ ಕ್ಷಣಕ್ಕೂ ಆತಂಕ ಹೆಚ್ಚಿಸಿದ್ದು, ಇಂದು ಒಂದೇ ದಿನದಲ್ಲಿ 7 ಜನರು ಕೊರೊನಾಗೆ ಬಲಿಯಾಗಿದ್ದಾರೆ.

ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ಕೊರೊನಾ ಸೋಂಕು ಅಟ್ಟಹಾಸ ಮೆರೆಯುತ್ತಿದ್ದು, ಇಂದು ಬಿಟಿಎಂ ಲೇಔಟ್ ನಲ್ಲಿ ದಂಪತಿಗಳಿಬ್ಬರು ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಕೊರೊನಾ ಗುಣಲಕ್ಷಣ ಕಂಡು ಬಂದ ಹಿನ್ನಲೆಯಲ್ಲಿ ದಂಪತಿಯನ್ನು ಜಯದೇವ ಆಸ್ಪತ್ರೆಗೆ ಕರೆದೊಯ್ಯುತ್ತಿರುವಾಗ ಮಾರ್ಗ ಮಧ್ಯೆಯೇ ಇಬ್ಬರೂ ಸಾವನ್ನಪ್ಪಿದ್ದಾರೆ.

Home add -Advt

ಇನ್ನು ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ ಎರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಓರ್ವ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ.

ಕೊರೊನಾದಿಂದಾಗಿ ಬೆಂಗಳೂರಿನಲ್ಲಿ ಸರಣಿ ಸಾವು ಸಂಭವಿಸುತ್ತಿದ್ದು, ಜನರಲ್ಲಿ ಆತಂಕವನ್ನು ಹೆಚ್ಚಿಸಿದೆ.

Related Articles

Back to top button