ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದೆ. ಇಂದು ಬೆಂಗಳೂರಿನಲ್ಲಿ ಡೆಡ್ಲಿ ಕೊರೊನಾ ಮತ್ತೊಂದು ಬಲಿ ಪಡೆದುಕೊಂಡಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಆತಿಹೆಚ್ಚು ಕೊರೊನಾ ಸೋಂಕು ಪತ್ತೆಯಾಗುತ್ತಿದ್ದು, ಬೆಂಗಳೂರು ಕೊರೊನಾ ಹಾಟ್ ಸ್ಪಾಟ್ ಎಂದು ಈಗಾಗಲೇ ಘೋಷಿಸಲಗಿದೆ. ಎಷ್ಟೇ ಮುಂಜಾಗೃತ ಕ್ರಮಗಳನ್ನು ಕೈಗೊಂಡರೂ ಕೂಡ ಕೊರೊನ ಸೋಂಕು ನಿಯಂತ್ರಣಕ್ಕೆ ಬರುತ್ತಿಲ್ಲ. ಇಂದು ಬೆಂಗಳೂರಿನಲ್ಲಿ 66 ವರ್ಷದ ವ್ಯಕ್ತಿಯೊಬ್ಬರು ಕೊರೊನಾ ಸೋಂಕಿಗೆ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿ ಬೆಂಗಳೂರಿನ ರಾಮಸ್ವಾಮಿ ಪಾಳ್ಯದ ನಿವಾಸಿಯಾಗಿದ್ದಾರೆ.
ಇವರು ಮಣಿಪುರದಿಂದ ಬೆಂಗಳೂರಿಗೆ ಬಂದಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೊರೊನಾ ಸೋಂಕು ಪತ್ತೆಯಾಗಿತ್ತು. ಬಳಿಕ ಇವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವ್ಯಕ್ತಿ ಸಾವನ್ನಪ್ಪಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಈ ವರೆಗೆ ಕೊರೊನಾಗೆ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಮೃತ ಸೋಂಕಿತನ ಜತೆ ಸಂಪರ್ಕ ಹೊಂದಿದ್ದ ಪತ್ನಿ, ಮಗ, ಅಳಿಯ ಹಾಗೂ ಆಟೋ ಚಾಲಕನ ತಾಪಾಸಣೆ ನಡೆಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ